Karavali kathanagalu: ಕರಾವಳಿ ಕಥನಗಳು
Material type:
- 9788195274956
- 23 K894.3 CHIK
Item type | Current library | Collection | Call number | Status | Notes | Barcode | |
---|---|---|---|---|---|---|---|
![]() |
St Aloysius Library | Kannada | K894.3 CHIK (Browse shelf(Opens below)) | Available | Donated by St Aloysius Prakashana | D04805 | |
![]() |
St Aloysius Library | Kannada | K894.3 CHIK (Browse shelf(Opens below)) | Available | Donated by St Aloysius Prakashana | D04806 | |
![]() |
St Aloysius Library Secondary stack section | Kannada | K894.3 CHIK (Browse shelf(Opens below)) | Available | Donated by St Aloysius Prakashana | D04807 | |
![]() |
St Aloysius Library | Kannada | K894.3 CHIK (Browse shelf(Opens below)) | Available | Donated by St Aloysius Prakashana | D04808 | |
![]() |
St Aloysius Library Secondary stack section | Kannada | K894.3 CHIK (Browse shelf(Opens below)) | Available | Donated by St Aloysius Prakashana | D04809 |
Browsing St Aloysius Library shelves, Collection: Kannada Close shelf browser (Hides shelf browser)
No cover image available No cover image available | No cover image available No cover image available | No cover image available No cover image available |
![]() |
![]() |
![]() |
![]() |
||
K894.3 CHID Dande ದಂಡೆ | K894.3 CHIE Elaneya hede. ಏಳನೆಯ ಹೆಡೆ | K894.3 CHIE Eradu dala. ಎರಡು ದಾಳ. | K894.3 CHIK Karavali kathanagalu: ಕರಾವಳಿ ಕಥನಗಳು | K894.3 CHIK Karavali kathanagalu: ಕರಾವಳಿ ಕಥನಗಳು | K894.3 CHIK Karavali kathanagalu: ಕರಾವಳಿ ಕಥನಗಳು | K894.3 CHIK Karavali kathanagalu: ಕರಾವಳಿ ಕಥನಗಳು |
‘ಕರಾವಳಿ ಕಥನಗಳು’ ಡಾ.ಕೆ. ಚಿನ್ನಪ್ಪ ಗೌಡರ ಸಂಶೋಧನ ಲೇಖನಗಳ ಸಂಕಲನ. ಇಲ್ಲಿ ಪಾಡ್ದನಗಳು ಬಗೆದು ಕಟ್ಟಿದ ಲೋಕದೃಷ್ಟಿ, ತುಳುವಿನ ಅಜ್ಜಿಕಥೆಗಳು, ಕೆಲಸ ಮತ್ತು ಕುಣಿತದ ಹಾಡುಗಳು, ಉಳ್ಳಾಲ್ತಿಯ ಪರಂಪರೆ ಮತ್ತು ಇತಿಹಾಸ, ಹೊಸ ತುಳು ಕಾವ್ಯ, ತಿಳಿ ಹೇಳುವ ತುಳು ಕತೆಗಳು, ತುಳು ತಲೆ ಎತ್ತಿ ನಿಲ್ಲುವ ಬಗೆ (ಅನುವಾದ ಮೀಮಾಂಸೆಯ ಕುರಿತ ಲೇಖನ ಇದು) ಮತ್ತು ಯಕ್ಷಗಾನದ ಇತಿಹಾಸ ಕಟ್ಟುವ ಕಷ್ಟದ ಕೆಲಸ- ಹೀಗೆ ಮುನ್ನೂರು ಪುಟಗಳ ಈ ಪುಸ್ತಕದಲ್ಲಿ ಎಂಟು ಸುದೀರ್ಘ ಸಂಶೋಧನ ಲೇಖನಗಳಿವೆ. ಈ ಕೃತಿಗೆ ಪ್ರೊ. ಪುರುಷೋತ್ತಮ ಬಿಳಿಮಲೆಯವರ ಮುನ್ನುಡಿ ಇದ್ದು, ಇದು “ತುಳುವಿನ ಘನತೆ ಹೆಚ್ಚಿಸುವ ಕೃತಿ” ಎಂದಿದ್ದಾರೆ. ಲೇಖಕರಾದ ಚಿನ್ನಪ್ಪ ಗೌಡರು ಈ ಎಂಟೂ ಸಂಶೋಧನ ಪ್ರಬಂಧಗಳ ವ್ಯಾಪ್ತಿ-ಉದ್ದೇಶ ಮತ್ತು ಆಶಯವನ್ನು ‘ಕಥನ ಕಾರಣ’ ಎಂಬ ತಮ್ಮ ಮಾತುಗಳಲ್ಲಿ ಹಿಡಿದಿಟ್ಟಿರುವುದರಿಂದ ಈ ಪುಸ್ತಕ ಏನನ್ನು ಉದ್ದೇಶಿಸಿದ ಪುಸ್ತಕ ಮತ್ತು ಏನನ್ನು ಮಾಡುವ ಪುಸ್ತಕ ಎಂಬುದು ಆರಂಭದಲ್ಲೇ ಸ್ಪಷ್ಟವಾಗುತ್ತದೆ. ಸರಳ, ನೇರ ಮತ್ತು ವಿವರ-ವಿವರ-ವಿವರ ಇವು ಚಿನ್ನಪ್ಪರ ಮಾತು ಮತ್ತು ಬರವಣಿಗೆಯ ಮೂಲಮಾತೃಕೆಗಳು. ಬಹಳ ಡಿಸ್ಕ್ರಿಪ್ಟಿವ್ ಮತ್ತು ಅನಲೆಟಿಕಲ್ ಆಗಿರುವ ಈ ಪುಸ್ತಕದ ಎಲ್ಲ ಲೇಖನಗಳು ತುಳು ಜಾನಪದ ಮತ್ತು ಸಾಹಿತ್ಯದ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಬರೆದ ಲೇಖನಗಳು. ತುಳುಭಾಷೆ, ಜಾನಪದ ಮತ್ತು ಸಾಹಿತ್ಯ ಇವುಗಳ ಮೋಹಕ ಮತ್ತು ಮಾಯಕದ ಲೋಕವನ್ನು ಇಲ್ಲಿಯ ಎಂಟೂ ಲೇಖನಗಳು ಓದುಗರಿಗೆ ಪದರುಪದರಾಗಿ ಪರಿಚಯಿಸುತ್ತವೆ. ಓರ್ವ ಶಿಸ್ತುಬದ್ಧ ಸಂಶೋಧಕರಾಗಿರುವ ಚಿನ್ನಪ್ಪ ಗೌಡರು ತಮ್ಮ ಪ್ರತಿಯೊಂದು ಲೇಖನದಲ್ಲೂ ಲೇಖನದ ಉದ್ದೇಶ, ವ್ಯಾಪ್ತಿ, ಅಧ್ಯಯನ ಕ್ರಮ ಮತ್ತು ಅಧ್ಯಯನಕ್ಕಿರುವ ಮುಂದಿನ ಸಾಧ್ಯತೆ ಇವನ್ನು ಬಹಳ ಸ್ಪಷ್ಟವಾಗಿ ದಾಖಲಿಸುತ್ತಾರೆ. ಅಷ್ಟೇ ಮುಖ್ಯವಾದುದು ಅವರು ಮಾಡುವ ಸಾಹಿತ್ಯ ಸಮೀಕ್ಷೆಯೂ ಕೂಡ. ಇಲ್ಲಿಯ ಎಲ್ಲ ಲೇಖನಗಳಲ್ಲಿ ಮೊತ್ತಮೊದಲಿಗೆ ಆ ಅಧ್ಯಯನ ವಿಷಯಕ್ಕೆ ಸಂಬಂಧಿಸಿದಂತೆ ನಡೆದಿರುವ ಅಗಾಧ ಕೆಲಸಕಾರ್ಯಗಳ ಸಮೀಕ್ಷೆಯನ್ನು ಚಿನ್ನಪ್ಪರು ಎಷ್ಟು ಅಚ್ಚುಕಟ್ಟಾಗಿ ಮಾಡುತ್ತಾರೆ ಎಂದರೆ ಒಬ್ಬ ಸಂಶೋಧನಾರ್ಥಿ ತನ್ನ ಸಂಶೋಧನೆಯ ಆರಂಭದಲ್ಲಿ ಮಾಡಲೇಬೇಕಾದ ಅತ್ಯಂತ ಪ್ರಮುಖ ಕೆಲಸ ಯಾವುದು ಎಂಬುದನ್ನೂ ಇದು ಹೇಳುವಂತಿದೆ.
There are no comments on this title.