TY - BOOK AU - Sha Shettar: ಶೆಟ್ಟರ್ ಷ AU - SHETTAR (Sha): ಶೆಟ್ಟರ್ (ಷ) TI - Modala Sahasramanada Kannada Shasanagalu: ಮೊದಲ ಸಹಸ್ರಮಾನದ ಕನ್ನಡ ಶಾಸನಗಳು : Kannada Inscriptions of the First Millennium CE Vol 6 SN - 9789392503085 U1 - 417K 23 PY - 2022/// CY - Bengaluru PB - Abhinava KW - Jinashasana: ಜಿನಶಾಸನ KW - Settar KW - Veeragallu: ವೀರಗಲ್ಲು KW - Danashasana: ದಾನಶಾಸನ KW - Vol-6 995-1000 CE N2 - ‘ಮೊದಲ ಸಹಸ್ರಮಾನದ ಕನ್ನಡ ಶಾಸನಗಳು ಸಂಪುಟ-6’ ಕೃತಿಯು ಷ. ಶೆಟ್ಟರ್ ಅವರ 2020- ಹಳಗನ್ನಡ ಶಾಸನಗಳ ಸಮಗ್ರ ಅಧ್ಯಯನ ಸಾ.ಶ.ಸು `995-1000’ ಕೃತಿಯಾಗಿದೆ. ಪಠ್ಯದಲ್ಲಿ ಬಳಕೆಯಾಗಿರುವ ಪ್ರತಿ ಹಳಗನ್ನಡ ಪದಕ್ಕೆ ಆಧುನಿಕ ಕನ್ನಡದಲ್ಲಿ ಅರ್ಥವನ್ನು ಒದಗಿಸಲಾಗಿದೆ. ಅದರ ವಿಶೇಷತೆಯನ್ನು ತಿಳಿಸಲು ಒಮ್ಮೊಮ್ಮೆ ಇನ್ನೂ ಹೆಚ್ಚಿನ ವಿವರಗಳನ್ನೂ ಕೊಡಲಾಗಿದೆ. ಮೊದಲ ಸಹಸ್ರಮಾನದಲ್ಲಿ ಬರೆಸಿದ ಹಳಗನ್ನಡ ಶಾಸನಗಳ ಸಂಖ್ಯಾ ಪ್ರಮಾಣವನ್ನಿನ್ನೂ ಇತ್ಯರ್ಥಗೊಳಿಸಬೇಕಾಗಿದೆ. ಆದರೆ, ಇವುಗಳಲ್ಲಿ ಹೆಚ್ಚಿನವು ಕನ್ನಡಲಿಪಿ ಮತ್ತು ಭಾಷೆಯಲ್ಲಿದ್ದವೆಂಬುದರ ಬಗ್ಗೆ ಸಂಶಯವಿಲ್ಲ, ಬಾಹ್ಮೀಲಿಪಿ ಮತ್ತು ಪ್ರಾಕೃತ ನುಡಿಗಟ್ಟುಗಳು ಮಾತ್ರ ಶಾಸನ ಮಾಧ್ಯಮಗಳಾಗಿದ್ದ ಕ್ರಿ.ಪೂ. ಮೂರನೆಯ ಶತಮಾನದಿಂದ ಕ್ರಿ.ಶ. ಮೂರನೆಯ ಶತಮಾನದ ಕಾಲಾವಧಿಯಲ್ಲಿ ಇಲ್ಲಿ ಬರೆಸಿದ ಸುಮಾರು 400 ಶಿಲಾಶಾಸನಗಳು ಈಗ ಉಳಿದುಕೊಂಡಿವೆ. ನಾಲ್ಕನೆಯ ಶತಮಾನದಿಂದ ಹತ್ತನೆಯ ಶತಮಾನದ ಕೊನೆಯವರೆಗೆ ಸಂಸ್ಕೃತ ಭಾಷೆ ಮತ್ತು ಹಳಗನ್ನಡ ಲಿಪಿಯಲ್ಲಿ (ಇಲ್ಲವೇ ಕನ್ನಡ ಮತ್ತು ಸಂಸ್ಕೃತ ದ್ವಿಭಾಷೆಗಳಲ್ಲಿ) ಬರೆಸಿದ ತಾಮ್ರಪಟ ಮತ್ತು ಶಿಲಾ ಶಾಸನಗಳಲ್ಲಿ ಸುಮಾರು 500 ಉಳಿದುಕೊಂಡಿವೆ. ಸರಿಸುಮಾರು ಇದೇ ಕಾಲಾವಧಿಯಲ್ಲಿ ಹಳಗನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಸಿದ 2000 ಹೆಚ್ಚು ಸಂಖ್ಯೆಯ ಶಿಲಾಶಾಸನಗಳೂ ತಾಮ್ರಪಟಗಳೂ ಈವರೆಗೂ ಲಭ್ಯವಾಗಿವೆ. 2000 .ಹಳಗನ್ನಡ ಶಾಸನಗಳನ್ನು ಸಂಪಾದಿಸಿ, ಮತ್ತೊಮ್ಮೆ ಪ್ರಕಟಿಸುವುದು, ಈ ಅಧ್ಯಯನದ ಉದ್ದೇಶವಾಗಿದೆ. ER -