N Chinnaswamy Sosale ಎನ್ ಚಿನ್ನಸ್ವಾಮಿ ಸೋಸಲೆ

Vijayanagara Saamraajya Mattu Samsthaanagala Samskrutika Charitre ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ - Hampi Kannada Viswavidyalaa 2021 - 477 p. PB 21x14 cm.

ಭಾರತದ ಚರಿತ್ರೆಯಲ್ಲಿ ನಮ್ಮ ಕರುನಾಡಿಗೆ ವಿಶಿಷ್ಟ ಸ್ಥಾನವಿದೆ. ಇದಕ್ಕೆ ಕಾರಣ ಈ ನಾಡನಾಳ್ವಿಕೆ ಮಾಡಿ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ವಿವಿಧ ಕಾಲಘಟ್ಟದಲ್ಲಿನ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ರಾಜ-ಮಹಾರಾಜರು ಕಾರಣರಾಗಿದ್ದಾರೆ. ಬಹುಮುಖ್ಯವಾಗಿ ಆಯಾಕಾಲದಲ್ಲಿ ಜೀವಿಸಿದ್ದ ಪಂಡಿತರು, ಸಾಹಿತಿಗಳು, ಶಿಲ್ಪ ಹಾಗೂ ಚಿತ್ರ ಕಲಾವಿದರು, ಕೃಷಿಕರು, ವಿಭಿನ್ನ ಶ್ರಮ ವೃತ್ತಿಯ ಜನಸಮುದಾಯದವರ ಕೊಡುಗೆ ಅಪಾರವಾಗಿದೆ. ಇಂದಿನ ಸಂದರ್ಭದಲ್ಲಿ ಚರಿತ್ರೆ ಅಧ್ಯಯನ ಮತ್ತು ರಚನೆ ಬಹುಸೂಕ್ಷ್ಮವಾದದ್ದು. ಆ ಸೂಕ್ಷ್ಮತೆ ಕೈತಪ್ಪಿದರೆ ಅದರ ಸಿದ್ಧಾಂತ ಸೂತ್ರ ಹರಿದ ಪಟದಂತಾಗುತ್ತದೆ ಎಂಬುದಕ್ಕೆ ಅನೇಕ ಜ್ವಲಂತ ನಿದರ್ಶನಗಳು ನಮ್ಮ ಮುಂದಿವೆ. ಸಮಕಾಲೀನ ಚರಿತ್ರೆಯನ್ನು ವಾಸ್ತವದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಬದುಕನ್ನು ಸರಳವಾಗಿ ಸ್ನೇಹಮನೋಭಾವನೆಯಿಂದ ಬೆಸೆಯುವ ಉಪಕರಣವಾಗಿ ಬಳಸಬೇಕು ಹಾಗೂ ಆ ಚರಿತ್ರೆಯು ವಾಸ್ತವ ಹಾಗೂ ಭವಿಷ್ಯದ ಬದುಕಿಗೆ ಸಂಪರ್ಕ ಕಲ್ಪಿಸುವ ಸೇತುವೆಯಾಗಬೇಕು ಎಂಬುದು ಚರಿತ್ರೆಕಾರರ ಆಶಯವೂ ಆಗಿದೆ. ಕನ್ನಡ ನಾಡಿನಲ್ಲಿ ವಿಜಯನಗರ ಸಾಮ್ರಾಜ್ಯದ ಚರಿತ್ರೆಗೆ ವಿಶೇಷ ಸ್ಥಾನವಿದೆ. ಇದಕ್ಕೆ ಕಾರಣ ಮಧ್ಯಕಾಲೀನ ಚರಿತ್ರೆ ರಚನೆಯಲ್ಲಿ ದೇಶ-ವಿದೇಶಗಳ ಚರಿತ್ರೆಕಾರರು ಅತ್ಯಂತ ಹೆಚ್ಚು ಗಮನ ಹರಿಸಿದ್ದು ಈ ಸಂಧರ್ಭದಲ್ಲಿನ ಸಾಂಸ್ಕೃತಿಕ ಪಲ್ಲಟಗಳ ಕುರಿತೇ ಎಂಬುದು ಕಾರಣವಾಗಿದೆ. ಮೇಲಿನ ಆಶಯದೊಂದಿಗೆ ರಚನೆಗೊಂಡಿರುವ ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನಗಳ ಸಾಂಸ್ಕೃತಿಕ ಚರಿತ್ರೆ ಎಂಬ ಈ ಕೃತಿ ರಾಜ ಕೀಯೇತರವಾಗಿ ವಿಭಿನ್ನ ನಲೆಯಲ್ಲಿ ಸಾಂಸ್ಕೃತಿಕವಾದ ಚಾರಿತ್ರಿಕ ಅಂಶಗಳನ್ನು ಸಮಗ್ರವಾಗಿ ಚರ್ಚಿಸುತ್ತದೆ. ವಿಜಯನಗರ ಸಾಮ್ರಾಜ್ಯ ಹಾಗು ಇಕ್ಕೇರಿ, ಮೈಸೂರು ಸಂಸ್ಥಾನಗಳ ರಾಜಮಹಾರಾಜರ ಬಿರುದು-ಬಾವಲಿಗಳನ್ನು ಅವರ ದಂಡಯಾತ್ರೆ, ಯುದ್ಧ, ದಾಳಿಗಳನ್ನು ಹೊರತುಪಡಿಸಿ ಜನಕೇಂದ್ರಿತ ಸೂಕ್ಷ್ಮಸಂವೇದನೆಯ ಸಾಂಸ್ಕೃತಿಕ ಅಧ್ಯಯನಕ್ಕೆ ಓದುಗರನ್ನು ಈ ಕೃತಿ ತೊಡಗಿಸುತ್ತದೆ. ಇಂಥ ಬಹುಸೂಕ್ಷ್ಮ ವಸ್ತುವಿಷಯವನ್ನು ಕೇಂದ್ರವನ್ನಾಗಿಸಿಕೊಂಡು ಸಂಶೋಧನಾತ್ಮಕ ಕೃತಿಯನ್ನು ಸಿದ್ಧಪಡಿಸಿರುವ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಪ್ರೊ, ಎನ್. ಚಿನ್ನಸ್ವಾಮಿ ಸೋಸಲೆ ಅವರಿಗೆ ಅಭಿನಂದನೆಗಳು,

9789387135710


Vijayanagara Saamraajya Samskrutika Charitre ವಿಜಯನಗರ ಸಾಮ್ರಾಜ್ಯಸಾಂಸ್ಕೃತಿಕ ಚರಿತ್ರೆ
Karnataka Itihasa ಕರ್ನಾಟಕ ಇತಿಹಾಸ

954.87K / SOSV